ಕಾರ್ಕಳ ಸರಕಾರಿ ಆಸ್ಪತ್ರೆಗೆ 6 ಕೋಟಿ ರೂ. ಅನುದಾನ ಮಂಜೂರು: ಸುನೀಲ್ ಕುಮಾರ್

Update: 2016-05-09 17:36 GMT

ಕಾರ್ಕಳ, ಮೇ 9: ಕಾರ್ಕಳದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಕೇವಲ ಕಾರ್ಕಳ ಮಾತ್ರವಲ್ಲದೆ ಆಸುಪಾಸಿನ ಜಿಲ್ಲೆ, ತಾಲೂಕುಗಳಿಂದ ಹೆರಿಗೆ ಸೇರಿದಂತೆ ವಿವಿಧ ಕಾಯಿಲೆಗಳ ಸಂಬಂಧ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಪ್ರಸ್ತುತ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ 6 ಕೋಟಿ ರೂ. ಬಿಡುಗಡೆಗೊಂಡಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗಿ ರೋಗಿಗಳು ಸಂಕಷ್ಟಪಡುತ್ತಿರುವುದರಿಂದ ಈ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಿ ಸೂಕ್ತ ಸೌಲಭ್ಯ ಕಲ್ಪಿಸುವುದು ಅತ್ಯವಶ್ಯಕವಾಗಿರುವುದನ್ನು ಗಮನಿಸಿ ಪ್ರಥಮ ಆದ್ಯತೆಯಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ 6 ಕೋಟಿ ರೂ. ಪ್ರಸ್ತಾವನೆ ತಯಾರಿಸಿ ಸರಕಾರಕ್ಕೆ ಸಲ್ಲಿಸಿದ್ದೇನೆ ಎಂದಿದ್ದಾರೆ. ಪ್ರಸ್ತಾವನೆ ಸಲ್ಲಿಸಿದ ಬಳಿಕ ಅನುದಾನ ಬಿಡುಗಡೆಗಾಗಿ ಸರಕಾರದ ಸಂಬಂಧಪಟ್ಟ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಹಾಗೂ ಸತತ ಪ್ರಯತ್ನದ ಫಲವಾಗಿ ಇದೀಗ ನಬಾರ್ಡ್‌ನ ಅನುದಾನದ ಆರ್‌ಐಡಿಎಪ್-21 ಯೋಜನೆಯಡಿ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 6 ಕೋಟಿ ರೂ. ಹಾಗೂ ಕುಕ್ಕುಂದೂರು ಎಎನ್‌ಎಂ ಉಪಕೇಂದ್ರದ ಕಟ್ಟಡ ಕಾಮಗಾರಿಗೆ 30 ಲಕ್ಷ ರೂ. ಸೇರಿದಂತೆ ಒಟ್ಟು 6.30 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News