ದಿನಾಂಕ ನಿಗದಿಗೆ ಇಂದು ಸಭೆ
Update: 2016-05-09 23:34 IST
ಬೆಂಗಳೂರು, ಮೇ 9: ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ವನ್ನು ಮೇ 12 ಅಥವಾ 13ರಂದು ಪ್ರಕಟಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂಡಳಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕಿ ಯಶೋದ ಬೋಪಣ್ಣ ಇಂದಿಲ್ಲಿ ತಿಳಿಸಿದ್ದಾರೆ.
ಫಲಿತಾಂಶ ಪ್ರಕಟಿಸುವ ದಿನಾಂಕ ನಿಗದಿ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅಜಯ್ ಸೇಠ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪೊನ್ನುರಾಜ್‌ರೊಂದಿಗೆ ಮೇ 10ರಂದು ಮಹತ್ವದ ಸಭೆ ನಡೆಯಲಿದೆ ಎಂದರು.
ಮೇ 12ರ ಮಧ್ಯಾಹ್ನದ ವೇಳೆಗೆ ಎಸೆಸೆಲ್ಸಿ ಫಲಿತಾಂಶ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಿದ್ದು, ಮೇ 13ರ ಬೆಳಗ್ಗೆ ರಾಜ್ಯದ ಎಲ್ಲ ಶಾಲೆಗಳಲ್ಲಿ ಎಸೆಸೆಲ್ಸಿ ಫಲಿತಾಂಶ ಪ್ರಕಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಫಲಿತಾಂಶ ಪ್ರಕಟಿಸುವ ದಿನಾಂಕ ನಿಗದಿಪಡಿಸಲಾಗುವುದೆಂದು ಸ್ಪಷ್ಟನೆ ನೀಡಿದರು.