ತುಳುನಾಡ ರಕ್ಷಣಾ ವೇದಿಕೆಯಿಂದ ಖಾಲಿ ಕೊಡ ಪ್ರದರ್ಶಿಸಿ ಧರಣಿ

Update: 2016-05-10 11:19 GMT

ಮಂಗಳೂರು, ಮೇ 10: ನಗರದಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಮನಪಾ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಇಂದು ತುಳುನಾಡ ರಕ್ಷಣಾ ವೇದಿಕೆಯಿಂದ ಮನಪಾ ಕಚೇರಿಯೆದುರು ನೀರು ಕೊಡಿ ಅಥವಾ ಹುದ್ದೆ ಬಿಡಿ ಎಂಬ ಘೋಷಣೆಯೊಂದಿಗೆ ಖಾಲಿ ಕೊಡಪಾನವನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಮನಪಾ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ, ಬೇಜವಾಬ್ದಾರಿತನ, ಕರ್ತವ್ಯಲೋಪದಿಂದ ಈ ಪರಿಸ್ಥಿತಿ ಉದ್ಭವಿಸಿದೆ. ನೀರಿನ ಸಮಸ್ಯೆ ಈ ರೀತಿಯಾಗಿ ತಲೆದೋರಲು ಕಾರಣರಾದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮವನ್ನು ಜರುಗಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಮುಖಂಡರಾದ ಪ್ರಶಾಂತ್ ರಾವ್ ಕಡಬ, ಇಬ್ರಾಹೀಂ, ಆನಂದ್ ಅಮೀನ್ ಅಡ್ಯಾರ್, ದಿನಕರ್ ಶೆಟ್ಟಿ, ಶಶಿಧರ್ ಶೆಟ್ಟಿ, ರಕ್ಷಿತ್ ಬಂಗೇರ, ರಾಘವೇಂದ್ರ ರಾವ್, ಸುನೀಲ್, ರಾಜೇಶ್, ದೇವಿಪ್ರಸಾದ್ ಶೆಟ್ಟಿ, ಭೋಜ ಪೂಜಾರಿ, ಸಿರಾಜ್ ಅಡ್ಕರೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News