ಇಂದು ವಿವಿಧ ಕಾಮಗಾರಿಗಳ ಉದ್ಘಾಟನೆ
ಕುಶಾಲನಗರ, ಮೇ 10: ಸೋಮವಾರಪೇಟೆ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ನಬಾರ್ಡ್ ಡಬ್ಲು. ಐ.ಎಫ್. 2014-15ನೆ ಸಾಲಿನ ಯೋಜನೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 8 ಚೌಡ್ಲು ಗ್ರಾಮದಲ್ಲಿರುವ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಮೇ 11ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಅಪ್ಪಚ್ಚು ರಂಜನ್‌ರವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದು. ಎಪಿಎಂಸಿ ಅಧ್ಯಕ್ಷ ಬಿ.ಬಿ.ಸತೀಶ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೃಷಿ ಮಾರುಕಟ್ಟೆ ಸಚಿವ ಡಾ. ಶಾಮನೂರು ಶಿವಶಂಕರಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಎ. ಮಂಜು, ವಿಶೇಷ ಅಹ್ವಾನಿತರಾಗಿ ಸಂಸದ ಪ್ರತಾಪ ಸಿಂಹ, ಎಂಎಲ್ಸಿ ಸುನೀಲ್ ಸುಬ್ರಮಣಿ, ಮಾಜಿ ಸಂಸದ ಎಚ್. ವಿಶ್ವನಾಥ್, ಜಿಪಂ ಅಧ್ಯಕ್ಷ ಬಿ.ಎ. ಹರೀಶ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.