ಖಾದ್ರಿ ಶಾಮಣ್ಣ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಆಯ್ಕೆ

Update: 2016-05-10 18:21 GMT

ಬೆಂಗಳೂರು, ಮೇ 10: 2016ನೆ ಸಾಲಿನ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಪದ್ಮರಾಜ ದಂಡಾವತಿ ಆಯ್ಕೆಯಾಗಿದ್ದಾರೆ.

ಕನ್ನಡ ಪತ್ರಿಕೋದ್ಯಮದಲ್ಲಿ ಗಮನಾರ್ಹ ಸಾಧನೆ ಮಾಡಿರುವವರನ್ನು ಗುರುತಿಸಿ 1995ರಿಂದ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪ್ರದಾನಿಸಲಾಗುತ್ತಿದೆ. 23ನೆ ಪ್ರಶಸ್ತಿಗೆ ಪರ್ತಕರ್ತ ಪದ್ಮರಾಜ ದಂಡಾವತಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
 ವಿಜಾಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಜನಿಸಿದ ದಂಡಾವತಿ ಕರ್ನಾಟಕ ವಿವಿಯಲ್ಲಿ ಕನ್ನಡ ಸ್ನಾತಕೊತ್ತರ ಪದವಿಯನ್ನು ಪಡೆದಿದ್ದಾರೆ. ‘ಶೂದ್ರ ಸಾಹಿತ್ಯ’ ಮಾಸ ಪತ್ರಿಕೆಯಲ್ಲಿ ಗೌರವ ಸಹ ಸಂಪಾದಕರಾಗಿ ಪತ್ರಿಕಾ ವೃತ್ತಿ ಆರಂಭಿಸಿದ ಅವರು, ಕಳೆದ ಮೂರುವರೆ ದಶಕಗಳಿಂದ ಪ್ರಜಾವಾಣಿ ದಿನ ಪತ್ರಿಕೆಯಲ್ಲಿ ನಾನಾ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಶಸ್ತಿಯನ್ನು ಜೂ.6ರಂದು ನಗರದ ಬಿ.ಎಂ.ಶ್ರೀ. ಕಲಾಭವನದಲ್ಲಿ ಮಂಡ್ಯ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ಖಾದ್ರಿ ಶಾಮಣ್ಣನವರ 91ನೆ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಪ್ರದಾನಿಸಲಾಗುವುದು ಎಂದು ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News