ಉತ್ತರಾಖಂಡ್‌ನಲ್ಲಿ ರಾಷ್ಟ್ರಪತಿ ಆಡಳಿತ ಹಿಂಪಡೆದ ಕೇಂದ್ರ ಸರಕಾರ ; ಸಿಎಂ ಆಗಿ ಮರಳಿದ ಕಾಂಗ್ರೆಸ್ ನ ಹರೀಶ್ ರಾವತ್
Update: 2016-05-11 14:02 IST
ನೈನಿತಾಲ್ , ಮೇ 11:ಉತ್ತರಾಖಂಡ್ ವಿಧಾನಸಭೆಯಲ್ಲಿ ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಮಂಗಳವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಪದಚ್ಯುತ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಸ್ಪಷ್ಟಬಹುತಮತ ಪಡೆದಿದ್ದು, ಇಂದು ಸುಪ್ರೀಂಕೋರ್ಟ್‌ನಲ್ಲಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ ಕೇಂದ್ರ ಸರಕಾರ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆದಿದೆ.
ಮುಖ್ಯಮಂತ್ರಿ ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ಸರಕಾರ ಉತ್ತರಾಖಾಂಡ್‌ನಲ್ಲಿ ಮರು ಸ್ಥಾಪಿತವಾಗಿದೆ. ಮಂಗಳವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಒಟ್ಟು 61 ಊರ್ಜಿತ ಮತಗಳ ಪೈಕಿ ಹರೀಶ್ ರಾವತ್ ನೇತೃತ್ವದ ಸರಕಾರಕ್ಕೆ 33 ಮತಗಳು ಸಿಕ್ಕಿದೆ.,
ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲು ಕೇಂದ್ರ ಸರಕಾರ ನಿರ್ಧಾರ ಕೈಗೊಂಡು ಅಂಕಿತಕ್ಕಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿಕೊಟ್ಟಿದೆ. ರಾಷ್ಟ್ರಪತಿಗಳ ಅಂಕಿತದ ಬಳಿಕ ಮತ್ತೆ ಹರೀಶ್ ರಾವತ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.