ಮೇ 13, 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

Update: 2016-05-11 18:42 GMT

ಪುತ್ತೂರು, ಮೇ 11: ಹಸಿರು ಶಕ್ತಿಯ ಸಂಭಾವ್ಯತೆಗಳು ಮತ್ತು ಬಳಕೆ (ಗ್ರೀನ್ ಎನರ್ಜಿ: ಪೊಟೆನ್‌ಶಿಯಲ್ಸ್ ಆ್ಯಂಡ್ ಅಪ್ಲಿಕೇಶನ್ಸ್) ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 13, 14ರಂದು ನಡೆಯಲಿದೆ ಎಂದು ಕಾಲೇಜಿನ ಮಾಧ್ಯಮ ವಿಬಾಗದ ಹರಿಪ್ರಸಾದ್ ಡಿ. ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. 13ರಂದು ಬೆಳಗ್ಗೆ 9:30ಕ್ಕೆ ಬೆಂಗಳೂರಿನ ಕರ್ನಾಟಕ ಪವರ್ ಕಾರ್ಪೊರೇಶನ್‌ನ ಸೊಲಾರ್ ಟೆಕ್ನಾಲಜಿಯ ರಾಷ್ಟ್ರೀಯ ತರಬೇತಿ ಕೇಂದ್ರದ ನಿರ್ದೇಶಕ ಡಾ.ನಾಗನಗೌಡ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಲರಾಮ ಆಚಾರ್ಯ ಅಧ್ಯಕ್ಷತೆ ವಹಿಸುವರು. ವಿಚಾರ ಸಂಕಿರಣದಲ್ಲಿ 26 ಸಂಶೋಧನಾ ಪ್ರಬಂಧಗಳು ಮಂಡಿಸಲ್ಪಡುತ್ತವೆ. ಮೇ 14ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸುಳ್ಯ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್. ಅತಿಥಿಯಾಗಿರುವರು. ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ವಿಶ್ವೇಶ್ವರ ಭಟ್ ಬಿ. ಅಧ್ಯಕ್ಷತೆ ವಹಿಸುವರು ಎಂದರು. ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಉಷಾಕಿರಣ್, ವಿಚಾರ ಸಂಕಿರಣ ಕಾರ್ಯಕ್ರಮ ಸಂಯೋಜಕ ಪ್ರೊ. ದೀಪಕ್ ಕೆ.ಬಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News