ಐಸಿಸಿ ನೂತನ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಆಯ್ಕೆ

Update: 2016-05-12 06:49 GMT

ಹೊಸದಿಲ್ಲಿ, ಮೇ 12: ಬಿಸಿಸಿಐನ ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ಐಸಿಸಿಯ ಸ್ವತಂತ್ರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಗುಪ್ತ ಮತದಾನದಲ್ಲಿ ಮನೋಹರ್ ಐಸಿಸಿಯ ಹೊಸ ಸಾರಥಿಯಾಗಿ ಆಯ್ಕೆಯಾದರು.

‘‘ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಒಂದು ಮಹಾನ್ ಗೌರವವಾಗಿದ್ದು, ನನ್ನ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಅವಿರೋಧವಾಗಿ ಆಯ್ಕೆ ಮಾಡಿರುವ ಎಲ್ಲ ಐಸಿಸಿ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುವೆ. ಬಿಸಿಸಿಐ ಅಧ್ಯಕ್ಷರಾಗಿದ್ದಾಗ ನನಗೆ ಬೆಂಬಲ ನೀಡಿದ್ದ ನನ್ನ ಎಲ್ಲ ಸಹೋದ್ಯೊಗಿಗಳಿಗೂ ಕೃತಜ್ಞತೆ ಸಲ್ಲಿಸುವೆ’’ಎಂದು ಮನೋಹರ್ ಪ್ರತಿಕ್ರಿಯೆ ನೀಡಿದ್ದಾರೆ.

ಐಸಿಸಿ ಸ್ವತಂತ್ರ ಅಧ್ಯಕ್ಷರಾಗುವವರು ಬೇರೊಂದು ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿರಬಾರದು ಎಂದು ಇತ್ತೀಚೆಗೆ ಐಸಿಸಿ ಹೊಸ ನಿಯಮ ಜಾರಿಗೆ ತಂದಿರುವ ಕಾರಣ ನಾಗ್ಪುರದ ವಕೀಲ ಮನೋಹರ್ ಮಂಗಳವಾರ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News