ಪೊಲೀಸ್ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
ಕಾಪು, ಮೇ 12: ಪಾಂಗಾಳ ಬಸ್ ನಿಲ್ದಾಣದ ಬಳಿ ಮೇ 11ರಂದು ಸಂಜೆ 7ಗಂಟೆಗೆ ಉಡುಪಿ ಸಶಸ ಮೀಸಲು ಪಡೆಯ ಟೆಂಪೊ ಟ್ರಾವೆಲರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಕಾಪು ಕೈಪುಂಜಾಲಿನ ಪೂವಪ್ಪ ಪುತ್ರನ್(75) ಎಂದು ಗುರುತಿಸಲಾಗಿದೆ. ಕಾಪು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸಶಸ ಮೀಸಲು ಪಡೆಯ ಟೆಂಪೊ ಬಸ್ ನಿಲ್ದಾಣದ ಬಳಿ ನಿಂತಿದ್ದ ಪೂವಪ್ಪ ಪುತ್ರನ್‌ರಿಗೆ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಕಾಪು, ಮೇ12: ಉದ್ಯಾವರ ಟಾಟಾ ಮೋಟಾರ್ಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇ 11ರಂದು ಬೆಳಗ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬಾಗಲಕೋಟೆ ಮೂಲದ ಸಿದ್ದಪ್ಪ(70) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿ ಸಿದ್ದಪ್ಪರಿಗೆ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಸಿದ್ದಪ್ಪಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು. ಇದನ್ನು ತಿಳಿದ ಕಾರು ಚಾಲಕ ಮೃತದೇಹವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.