ಬಸ್-ಓಮ್ನಿ ಢಿಕ್ಕಿ: ಓರ್ವ ಗಂಭೀರ
Update: 2016-05-13 17:43 IST
ಮುಲ್ಕಿ, ಮೇ 13: ಬಸ್ ಮತ್ತು ಓಮ್ನಿ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓಮ್ನಿ ಚಾಲಕ ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಸಮೀಪದ ಐಕಳ ತಿರುವಿನಲ್ಲಿ ನಡೆದಿದೆ.
ಕಿನ್ನಿಗೋಳಿ ಕಡೆಯಿಂದ ಮೂಡುಬಿದಿರೆ ಕಡೆಗೆ ಸಂಚರಿಸುತ್ತಿದ್ದ ಬಸ್ಸಿಗೆ ಮೂಡುಬಿದಿರೆ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರು ಢಿಕ್ಕಿ ಹೊಡೆಯಿತು ಎನ್ನಲಾಗಿದೆ.
ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.