ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ
Update: 2016-05-13 23:47 IST
ಉಡುಪಿ, ಮೇ 13: ಮಾನವನ ಮನಸ್ಸಿನಲ್ಲಿ ಪ್ರತಿ ಜೀವಿಯ ಮೇಲೆ ಪ್ರೀತಿಯ ಅಂತರಗಂಗೆ ಹರಿದರೆ ಭೂಮಿ ಸ್ವರ್ಗವಾಗಲು ಸಾಧ್ಯ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ನಿಕೇತನಾ ಹೇಳಿದ್ದಾರೆ.
ಶುಕ್ರವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಿಟ್ಟೂರಿನ ಸರಕಾರಿ ಬಾಲಕಿಯರ ಬಾಲಮಂದಿರ (ಸ್ಟೇಟ್ ಹೋಂ)ದಲ್ಲಿ ಶ್ರೀಭಗೀರಥ ಮಹರ್ಷಿ ಜಯಂತಿ ಆಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ್ದರು.
ಉಡುಪಿ ತಹಶೀಲ್ದಾರ್ ಗುರುಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ದೇವದಾಸ ಪೈ ಸ್ವಾಗತಿಸಿದರು. ಸರಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ಎಚ್.ಎಸ್. ಜೋಗೇರ್ ವಂದಿಸಿದರು. ಶಂಕರದಾಸ್ ಚಂಡ್ಕಳ ಕಾರ್ಯಕ್ರಮ ನಿರೂಪಿಸಿದರು. ಅನುರಾಧಾ ಮಯ್ಯ ಹಿಲಿಯಾಣರಿಂದ ಕೀರ್ತನೆಗಳ ಗಾಯನ ನಡೆಯಿತು.