ಮೇ 22ರಂದು ಬಿಸಿಸಿಐ ಹೊಸ ಅಧ್ಯಕ್ಷರ ಆಯ್ಕೆಗೆ ವಿಶೇಷ ಸಭೆ

Update: 2016-05-14 06:27 GMT

ಹೊಸದಿಲ್ಲಿ, ಮೇ 14: ಶಶಾಂಕ್‌ ಮನೋಹರ್‌ ರಾಜೀನಾಮೆಯಿಂದ ತೆರವಾಗಿರುವ ಬಿಸಿಸಿಐ ಅಧ್ಯಕ್ಷ ಸ್ಥಾನದ ಮೇಲೆ ಹಲವು ಮಂದಿ ಕಣ್ಣಿಟ್ಟಿದ್ದಾರೆ. ಬಿಸಿಸಿಐಗೆ ನೂತನ ಅಧ್ಯಕ್ಷರ ಆಯ್ಕೆಗೆ ವಿ಼ಶೇಷ ಸಾಮಾನ್ಯ ಸಭೆ ಮೇ 22ರಂದು ನಡೆಯಲಿದೆ.
ಶಶಾಂಕ್‌ ಮನೋಹರ‍್ ಐಸಿಸಿ ಸ್ವತಂತ್ರ ಚೇರ್ಮೆನ್‌ ಆಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿದ್ದಾರೆ. ಈ ಕಾರಣದಿಂದಾಗಿ ಬಿಸಿಸಿಐ ಅಧ್ಯಕ್ಷ ಸ್ಥಾನ ತೆರವಾಗಿದೆ. ಲಭ್ಯ ಮಾಹಿತಿ ಪ್ರಕಾರ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್‌ , ಐಪಿಎಲ್ ಅಧ್ಯಕ್ಷ ರಾಜೀವ್‌ ಶುಕ್ಲಾ ಮತ್ತು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಜಯ್‌ ಶಿರ್ಕೆ ಪ್ರತಿಷ್ಠಿತ ಬಿಸಿಸಿಐ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News