×
Ad

ಬೆಂಗಳೂರು ನಗರ ರೈಲು ನಿಲ್ದಾಣ ಇನ್ನು ’ಸಂಗೊಳ್ಳಿ ರಾಯಣ್ಣ ನಿಲ್ದಾಣ ’

Update: 2016-05-15 15:40 IST

  ಬೆಂಗಳೂರು,ಮೇ 15:  ಬೆಂಗಳೂರು ನಗರ ರೈಲ್ವೆ ನಿಲ್ದಾಣಕ್ಕೆ ಇಂದು ಅಧಿಕೃತವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಎಂದು  ಮರುನಾಮಕರಣ  ಮಾಡಲಾಗಿದೆ.
ರವಿವಾರ  ಯಲಹಂಕ-ಪೆನುಕೊಂಡ, ಅರಸೀಕೆರೆ-ತುಮಕೂರು ಮತ್ತು ಹುಬ್ಬಳ್ಳಿ-ಚಿಕ್ಜಾಜೂರು ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು    ಬೆಂಗಳೂರು ನಗರ ರೈಲ್ವೆ ನಿಲ್ದಾಣವನ್ನು  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಎಂದು  ಅಧಿಕೃತವಾಗಿ ಘೋಷಣೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ .ವಿ.ಸದಾನಂದ ಗೌಡ, ವೆಂಕಯ್ಯ ನಾಯ್ಡು  ಮತ್ತಿತರರು ಈ  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News