ಮೇ 16ರಂದು ಎಸೆಸೆಲ್ಸಿ ಫಲಿತಾಂಶ ಪ್ರಕಟ
Update: 2016-05-15 19:59 IST
ಬೆಂಗಳೂರು, ಮೇ 15: ಎಸೆಸೆಲ್ಸಿ ಪರೀಕ್ಷಾ ಫಲಿತಾಂಶವು ಮೇ 16ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋಧಾ ಬೋಪಣ್ಣ ತಿಳಿಸಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ವೆಬ್‌ಸೈಟ್‌ಗಳಲ್ಲಿ ಮಾತ್ರ ಫಲಿತಾಂಶ ಲಭ್ಯವಾಗಲಿದ್ದು, ಮೇ 17ರಂದು ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. 2015-16ನೆ ಸಾಲಿನಲ್ಲಿ ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ.