×
Ad

ನಿಯಂತ್ರಣ ತಪ್ಪಿ ಕಾರು ಪಲ್ಟಿ ಮಂಗಳೂರು ಮೂಲದ ತಂದೆ-ಮಗ ಮೃತ್ಯು

Update: 2016-05-15 23:45 IST

ಬೆಂಗಳೂರು, ಮೇ 15: ಶರವೇಗದಲ್ಲಿ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿಉರುಳಿ ಮಂಗಳೂರು ಮೂಲದ ತಂದೆ-ಮಗ ಸಾವನ್ನಪ್ಪಿರುವ ದಾರುಣ ಘಟನೆ ಇಲ್ಲಿನ ನೆಲಮಂಗಲ ತಾಲೂಕಿನ ಮಹದೇವಪುರ ವ್ಯಾಪ್ತಿಯಲ್ಲಿ ರವಿವಾರ ಸಂಭವಿಸಿದೆ.
ಮೃತರನ್ನು ಮಂಗಳೂರು ಮೂಲದ ಮನ್ಸೂರ್‌ಪಾಷ (50), ರಾಹಿಲ್ (30) ಎಂದು ಗುರುತಿಸಲಾಗಿದೆ.
 ಮಹದೇವಪುರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಉರುಳಿದ ರಭಸದಲ್ಲಿ ಕಾರಿನಲ್ಲಿದ್ದ ತಂದೆ-ಮಗ ಇಬ್ಬರಿಗೂ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಗ ರಾಹೀಲ್‌ನನ್ನು ವಿದೇಶಕ್ಕೆ ಕಳುಹಿಸಲು ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹಗಳನ್ನು ಇಲ್ಲಿನ ನೆಲಮಂಗಲದ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೋಲಿಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News