×
Ad

ಎಸೆಸೆಲ್ಸಿ: ವಗ್ಗ ಶಾಲೆಗೆ ಶೇ. 100 ಫಲಿತಾಂಶ

Update: 2016-05-17 18:29 IST

ವಿಟ್ಲ, ಮೇ 17: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾವಳಪಡೂರು ಗ್ರಾಮದ ವಗ್ಗ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 27 ವರ್ಷದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಶೇ.100 ಫಲಿತಾಂಶವನ್ನು ದಾಖಲಿಸಿದೆ.

ಒಟ್ಟು 43 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 3 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ನಾಲ್ಕು ಮಂದಿ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿನಿ ಸಲ್ಮತ್ ಬಾನು 586 (93.76ಶೇ.) ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾಳೆ. ಈಕೆ ವಗ್ಗ ನಿವಾಸಿ ಅಬ್ದುಲ್ ಕರೀಂ ಹಾಗೂ ಸುಮಯ್ಯಾ ಬಾನು ದಂಪತಿಯ ಪುತ್ರಿ.

ಸಂಸ್ಥೆಯ ವಿದ್ಯಾರ್ಥಿನಿಯರಾದ ಫಾತಿಮಾ ಶಕೀಲಾ 580 (92.8 ಶೇ.) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಮಮತಾ 563 (90 ಶೇ.) ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News