ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನಾಚರಣೆ

Update: 2016-05-17 17:58 GMT

ಮಂಗಳೂರು, ಮೇ 17: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ದೂರವಾಣಿ ಮೂಲಕ ಸೇವೆಯನ್ನು ನೀಡುತ್ತಿರುವ, ಚೈಲ್ಡ್‌ಲೈನ್-1098 ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನಾಚರಣೆಯ ಪ್ರಯುಕ್ತ ಚೈಲ್ಡ್‌ಲೈನ್-1098 ಮಂಗಳೂರು ವತಿಯಿಂದ ಇಂದು ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಕನೆಕ್ಟಿಂಗ್ ಚಿಲ್ಡ್ರನ್ ಎಂಬ ಧ್ಯೇಯದೊಂದಿಗೆ ಚೈಲ್ಡ್‌ಲೈನ್-1098 ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ನಿಖೇಶ್ ಶೆಟ್ಟಿ,ಮಂಗಳೂರು- ಕೇಂದ್ರ ರೈಲ್ವೆ ನಿಲ್ದಾಣ ಇವತ್ತಿನ ದಿನಗಳಲ್ಲಿ ಮಕ್ಕಳ ಸಾಗಾಟ ಮತ್ತು ಮಕ್ಕಳ ನಾಪತ್ತೆಯಲ್ಲಿ ಪ್ರಮುಖ ಮಾರ್ಗವಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕೇಂದ್ರ ರೈಲು ನಿಲ್ದಾಣದಲ್ಲಿ ಪತ್ತೆಯಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಾಣೆಯಾದ ಮಕ್ಕಳು ಹಾಗೂ ಮಕ್ಕಳು ಇಲ್ಲಿಂದ ತಪ್ಪಿಸಿಕೊಂಡು ಹೊಗುತ್ತಿರುವ ಮಕ್ಕಳ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ರೈಲ್ವೆ ಇಲಾಖೆ ಹಾಗೂ ರೈಲ್ವೆ ಪೊಲೀಸ್ ಇಲಾಖೆ ಇಂತಹ ಪ್ರಕರಣಗಳಲ್ಲಿ ಚೈಲ್ಡ್‌ಲೈನ್-1098 ಹಾಗೂ ಮಕ್ಕಳ ಕಲ್ಯಾಣ ಸಮಿತಿಗೆ ಸಹಕರಿಸಬೇಕು ಎಂದು ಹೇಳಿದರು.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಸ್ಟೇಷನ್ ಮ್ಯಾನೇಜರ್ ಕುಂಞಿ ಕಣ್ಣನ್ , ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದ ಪೊಲೀಸ್ ನಿರೀಕ್ಷಕ ಪುರುಷೋತ್ತಮ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಚೈಲ್ಡ್‌ಲೈನ್ ಮಂಗಳೂರು-1098ರ ಕೇಂದ್ರ ಸಂಯೋಜಕ ಸಂಪತ್ ಕಟ್ಟಿ ಪ್ರಾಸ್ತಾಕವಾಗಿ ಮಾತನಾಡಿದರು. ಚೈಲ್ಡ್‌ಲೈನ್ ಮಂಗಳೂರು-1098 ಇದರ ನಗರ ಸಂಯೋಜಕ ಯೋಗೀಶ್ ಮಲ್ಲಿಗೆಮಾಡು ಸ್ವಾಗತಿಸಿ, ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News