×
Ad

ಮೇ 22: ವಿವೇಕಾನಂದ ಕಾಲೇಜ್‌ನಲ್ಲಿ ಸಿಇಟಿ ಕೌನ್ಸೆಲಿಂಗ್ ಮಾಹಿತಿ ಕಾರ್ಯಾಗಾರ

Update: 2016-05-18 14:45 IST

ಪುತ್ತೂರು, ಮೇ 18: ಸಿಇಟಿ ದಾಖಲೆಗಳನ್ನು ಹೊಂದಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಮೂಡುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮೇ 22ರಂದು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಕೌನ್ಸೆಲಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಮಾಧ್ಯಮ ವಿಭಾಗದ ಶ್ರೀ ಹರಿಪ್ರಸಾದ್ ಡಿ ತಿಳಿಸಿದ್ದಾರೆ.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದೊಂದಿಗೆ ಸಿ ಇ ಟಿ ಕೌನ್ಸೆಲಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ ’ಪ್ರಕ್ರಿಯೆ-2016’ ಕಾರ್ಯಾಗಾರ ಬೆಳಗ್ಗೆ 9.30 ಕ್ಕೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಪುತ್ತೂರಿನ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗಾಗಿ ಇದನ್ನು ನಡೆಸಲಾಗುತ್ತಿತ್ತು. ಹತ್ತಿರದ ತಾಲೂಕುಗಳ ವಿದ್ಯಾರ್ಥಿಗಳ ಹಾಗೂ ಪೋಷಕರ ಒತ್ತಾಯದ ಮೇರೆಗೆ ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಾಸರಗೋಡಿನ ವಿದ್ಯಾರ್ಥಿಗಳಿಗೆ ಈ ಬಾರಿ ಇದರಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕೆ ಇ ಎ ಯ ಮಾಹಿತಿ ಪ್ರಕಾರ ಮೇ 28 ರಂದು ಸಿ ಇ ಟಿ ಫಲಿತಾಂಶವು ಹೊರಬೀಳುವ ನಿರೀಕ್ಷೆ ಇದೆ. ಇದಾದ ತಕ್ಷಣ ಅಂದರೆ ಜೂನ್ 1 ನೇ ತಾರೀಕಿನಿಂದಲೇ ದಾಖಲೆಗಳ ಪರಿಶೀಲನೆ ನಡೆಯುತ್ತದೆ. ಅವಶ್ಯ ದಾಖಲೆಗಳನ್ನು ಹೊಂದಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಮೂಡಬಹುದಾದ ಗೊಂದಲಗಳ ನಿವಾರಣೆಗಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು ಎಲ್ಲ ಸಮಸ್ಯೆಗಳಿಗೆ ಸೂಕ್ತ ಉತ್ತರವನ್ನು ನೀಡಲಿದ್ದಾರೆ. ಸಿ ಇ ಟಿ ಪರೀಕ್ಷಾ ಫಲಿತಾಂಶದ ನಂತರ ವೃತ್ತಿಪರ ಕಾಲೇಜಿಗೆ ಸೇರುವಲ್ಲಿಯವರೆಗಿನ ಎಲ್ಲಾ ಪ್ರಕ್ರಿಯೆಗಳ ಸ್ಥೂಲ ಮಾಹಿತಿಯನ್ನು ಅವರು ನೀಡಲಿದ್ದಾರೆ. ಅರ್ಹ ವಿದ್ಯಾರ್ಥಿಗಳು ಇದರ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದ ಅವರು ಅದೇ ದಿನ ಮಧ್ಯಾಹ್ನ 2 ಗಂಟೆಯವರೆಗೆ ಈ ಕಾರ್ಯಾಗಾರವು ನಡೆಯಲಿದ್ದು ಇದಕ್ಕೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಇದರಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿ ತಮ್ಮ ಭಾಗವಹಿಸುವಿಕೆಯನ್ನು ಧೃಢೀಕರಿಸಬೇಕು. ಆಸಕ್ತರು 08251-234555, 9945825645 ದೂರವಾಣಿಯನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಉಷಾಕಿರಣ್, ಕ್ಯಾಂಪಸ್ ನಿರ್ದೇಶಕ ಪ್ರೊ. ವಿವೇಕ್ ರಂಜನ್ ಭಂಡಾರಿ , ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ. ಪ್ರಶಾಂತ್ ರಾವ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News