×
Ad

ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತ ವೈದ್ಯಕೀಯ ಶಿಬಿರ

Update: 2016-05-18 14:47 IST

ಪುತ್ತೂರು, ಮೇ 18: ಪುತ್ತೂರಿನ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಪುತ್ತೂರು, ವಿಟ್ಲ ಮತ್ತು ಸುಳ್ಯದಲ್ಲಿ ಉಚಿತ ವೈದ್ಯಕೀಯ ಶಿಬಿರನ್ನು ಹಮ್ಮಿಕೊಳ್ಳಲಾಗಿದ್ದು, ಮೇ 22ರಂದು ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಮತ್ತು ವಿಟ್ಲದ ಮಂಗಳಮಂಟಪದಲ್ಲಿ ಹಾಗೂ ಮೇ 29ರಂದು ಸುಳ್ಯದಲ್ಲಿ ಕಾಯರ್ತ್ತೋಡಿ ದೇವಸ್ಥಾನದ ವಠಾರದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ವಸಂತ ಎ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಬಿಎಂಎಸ್ ಅಟೋರಿಕ್ಷಾ ಚಾಲಕ ಮಾಲಕರ ಸಂಘ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಇದರ ಸಹಯೋಗದಲ್ಲಿ ನಡೆಯಲಿರುವ ಶಿಬಿರದ ಸಭಾ ಕಾರ್ಯಕ್ರಮವನ್ನು ಬಿಎಂಎಸ್ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್ ಉದ್ಘಾಟಿಸಲಿದ್ದಾರೆ.

ಟ್ರಸ್ಟ್‌ನ ಆಡಳಿತ ನಿರ್ದೇಶಕ ಎಸ್.ಆರ್ ಸತೀಶ್ಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಎಎಸ್‌ಪಿ ಸಿ.ಬಿ. ರಿಷ್ಯಂತ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿಟ್ಲದಲ್ಲಿ ಭಾಲವಾಲೀಕರ್/ರಾಜಾಪುರ ಸಾರಸ್ವತ ಸೇವಾ ಸಂಘ ಮತ್ತು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ನಡೆಯುವ ಶಿಬಿರವನ್ನು ವಿಟ್ಲ ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಸಂದ್ಯಾ ಮೋಹನ್ ಸೆರಾಜೆ ಉದ್ಘಾಟಿಸಲಿದ್ದಾರೆ.

ಸರಸ್ವತಿ ಕ್ರೆಡಿಟ್ ಸೌಹಾರ್ಧ ಸಹಕಾರಿ ಉಪಾದ್ಯಕ್ಷ ವಿನಯ ಕುಮಾರ್ ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಭಾಲವಾಲೀಕರ್/ರಾಜಾಪುರ ಸಾರಸ್ವತ ಸೇವಾ ಸಂಘದ ಅಧ್ಯಕ್ಷ ಶಶಿಧರ್ ನಾಯಕ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸುಳ್ಯದಲ್ಲಿ ಮಿತ್ರ ಬಳಕ ಕಾಯರ್ತೋಡಿ ಮತ್ತು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ನಡೆಯಲಿರುವ ಶಿಬಿರವನ್ನು ಕಾಯರ್ತೋಡಿ ದೇವಸ್ಥಾನದ ಆಡಳಿತಾಧಿಕಾರಿ ಲಿಂಗಪ್ಪ ನಾಯ್ಕ ಉದ್ಘಾಟಿಸಲಿದ್ದಾರೆ.

ಸರಸ್ವತಿ ಕ್ರೆಡಿಟ್ ಸೌಹಾರ್ಧ ಸಹಕಾರಿ ಉಪಾದ್ಯಕ್ಷ ವಿನಯ ಕುಮಾರ್ ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮತ್ತಿತರರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ನಿರ್ದೇಶಕ ಪದ್ಮನಾಭ ಬೋರ್ಕರ್, ಬಿಎಂಎಸ್ ಅಟೋರಿಕ್ಷಾ ಚಾಲಕ ಮಾಲಕರ ಸಂಘದ ಮುಖಂಡರಾದ ಭಾಸ್ಕರ, ದೇವಪ್ಪ ಮತ್ತು ಮೋಹನ್ ಹೆಗ್ಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News