ಮಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಪ್ರವಾಸ
Update: 2016-05-18 22:06 IST
ಮಂಗಳೂರು, ಮೇ 18: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಮೇ 19 ಮತ್ತು 20ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಬೆಳಗ್ಗೆ 8:45 ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು ಬಳಿಕ ಶೃಂಗೇರಿಗೆ ತೆರಳಲಿದ್ದಾರೆ. ಸಂಜೆ 4 ಗಂಟೆಗೆ ಮಂಗಳೂರಿಗೆ ಆಗಮಿಸುವ ಅವರು, 5.30ಕ್ಕೆ ಮೆಸ್ಕಾಂ ಆಡಳಿತ ಕಟ್ಟಡ ಉದ್ಘಾಟನೆ ನೆರವೇರಿಸಿ ಬಳಿಕ ಪುರಭವನದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ನಗರದಲ್ಲಿ ವಾಸ್ತವ್ಯ ಹೂಡುವರು.
ಮೇ 20ರಂದು ಬೆಳಗ್ಗೆ ಸುಳ್ಯ ತೆರಳುವ ಸಚಿವರು, 10 ಗಂಟೆಗೆ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಲಿದ್ದಾರೆ. 12:30ಕ್ಕೆ ಸುಬ್ರಹ್ಮಣ್ಯದಲ್ಲಿ 33 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉದ್ಘಾಟನೆ, ಸಂಜೆ 4ಗಂಟೆಗೆ ಪುತ್ತೂರಿನಲ್ಲಿ 33 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉದ್ಘಾಟನೆ, ರಾತ್ರಿ 7 ಗಂಟೆಗೆ ಮಂಗಳೂರಿಗೆ ಆಗಮಿಸಿ, ರಾತ್ರಿ 8.5ಕ್ಕೆ ಬೆಂಗಳೂರು ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.