×
Ad

ಶಿವಮೊಗ್ಗ: ಬಾಲಕಿಯರ ಹಾಸ್ಟೆಲ್‌ಗೆ ಜಿಲ್ಲಾಧಿಕಾರಿ ಭೇಟಿ

Update: 2016-05-18 23:05 IST

ಶಿವಮೊಗ್ಗ, ಮೇ 18: ಕಳೆದ ಕೆಲ ದಿನಗಪರಿಳ ಹಿಂದೆ ಬಿರುಗಾಳಿ ಮಳೆಗೆ ಕೊಠಡಿಗಳ ಮೇಲ್ಛಾವಣಿ ಹಾರಿ ಹೋಗಿದ್ದ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ಗೆ ಬುಧವಾರ ಬೆಳಗ್ಗೆ ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿಯವರು ಭೇಟಿನೀಡಿ ಶೀಲನೆ ನಡೆಸಿದರು.

ಈ ಸಂದರ್ಭ ಕಾಮಗಾರಿ ನಿರ್ವಹಣೆ ಮಾಡಿದ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆದುಕೊಂಡ ಜಿಲ್ಲಾಧಿಕಾರಿಯವರು ಸಮರೋಪಾದಿಯಲ್ಲಿ ದುರಸ್ತಿ ಕಾರ್ಯ ನಡೆಸುವಂತೆ ಸೂಚಿಸಿದರು. ಏನಾಗಿತ್ತು?: 

ಕಳೆದ ಮೇ 16 ರಂದು ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಹಾಸ್ಟೆಲ್‌ನ ಎರಡು ಕೊಠಡಿಗಳ ಮೇಲ್ಛಾವಣಿ ಶೀಟ್‌ಗಳು ಹಾರಿ ಹೋಗಿ, ವಿದ್ಯಾರ್ಥಿ ನಿಲಯದ ಒಳ ಭಾಗದಲ್ಲಿ ಬಿದ್ದಿತ್ತು. ಅದೃಷ್ಟವಶಾತ್ ಹಾಸ್ಟೆಲ್‌ನಲ್ಲಿ ತಂಗಿದ್ದ ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿದ್ದ ಸ್ಥಳೀಯ ತಾಲೂಕು ಆಡಳಿತದ ಅಧಿಕಾರಿಯವರು, ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದ್ದು, ಸರಿಯಾದ ನಿರ್ವಹಣೆ ಇಲ್ಲದ ಕಾರಣ ಈ ಘಟನೆ ನಡೆದಿತ್ತು ಎಂದು ಜಿಲ್ಲಾಧಿ ಕಾರಿಯವರಿಗೆ ವರದಿ ನಿಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿಯವರು ಭೇಟಿನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News