ಜಿಲ್ಲಾಡಳಿತದಿಂದ ಸರಕಾರಕ್ಕೆ ವರದಿ
Update: 2016-05-18 23:31 IST
ಮಂಗಳೂರು, ಮೇ 18: ಉಳ್ಳಾಲ ದರ್ಗಾ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿ ಉಂಟಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಡಳಿತವು ರಾಜ್ಯ ಸರಕಾರವನ್ನು ಕೋರಿದೆ.
ಕೆಲವು ದಿನಗಳಿಂದ ಉಳ್ಳಾಲ ದರ್ಗಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗೆ ಸಂಬಂಧಿಸಿ ಸರಕಾರಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಕಮಿಷನರ್ ಸರಕಾರಕ್ಕೆ ಪ್ರತ್ಯೇಕ ವರದಿಯನ್ನು ಸಲ್ಲಿಸಿದ್ದಾರೆ.
ಅಧ್ಯಕ್ಷರ ಆಯ್ಕೆ ಸಂಬಂಧ ಎರಡೂ ಬಣಗಳಿಂದ ಒಮ್ಮತ ಮೂಡದಿರುವುದರಿಂದ ಇತ್ತಂಡಗಳ ಮಧ್ಯೆ ಗಲಾಟೆಗಳು ಮುಂದುವರಿದಿದ್ದು, ಶಮನಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಒಂದೋ ದರ್ಗಾ ಕಮಿಟಿ ಸದಸ್ಯರೇ ಒಮ್ಮತದಿಂದ ಗೊಂದಲವನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಸರಕಾರವೇ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ನಿರ್ದೇಶನ ಕೋರಿ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ತಿಳಿಸಿದ್ದಾರೆ.