×
Ad

ಮಹಿಳೆಯರು ಕ್ರಿಯಾಶೀಲರಾದರೆ ಸಮಾಜದಲ್ಲಿ ಯಶಸ್ಸು: ಸಚಿವ ಡಿ.ಕೆ.ಶಿವಕುಮಾರ್

Update: 2016-05-20 21:29 IST

ಸುಳ್ಯ, ಮೇ 20: ಸಮಾಜದಲ್ಲಿ ಹೆಣ್ಣಿಗೆ ಪ್ರಾಮುಖ್ಯತೆ ಇದೆ. ಮಹಿಳೆಯರು ಸಮಾಜದಲ್ಲಿ ಯಾವುದೇ ಕೆಲಸ ಮಾಡಿದರೆ ಕಾನೂನು ಬದ್ಧವಾಗಿ, ಉತ್ತಮವಾಗಿ ಮಾಡುತ್ತಾರೆ. ಇದರಿಂದ ಸಮಾಜವೂ ಯಶಸ್ವಿಯಾಗುತ್ತದೆ. ಸಹಕಾರಿ ಸಂಘದ ಏಳಿಗೆಗೂ ಎಲ್ಲರೂ ಜೊತೆಗೂಡಿ ಕೆಲಸ ಮಾಡಬೇಕು. ಆಗ ಯಶಸ್ಸು ಸಿಗುತ್ತದೆ ಎಂದು ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಅವರು ಸುಳ್ಯ ಸ್ಪಂದನಾ ಮಹಿಳಾ ಸೌಹಾರ್ದ ಸಹಕಾರಿ ಸಂಘ ಇದರ ನೂತನ ಸಂಸ್ಥೆಯನ್ನು ಹಾಗೂ ಸಭಾ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಕಚೇರಿಯನ್ನು ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಸದೃಢವಾಗಿ ಬೆಳೆದಿದೆ. ಸಹಕಾರಿ ಕ್ಷೇತ್ರ ಹೆಣ್ಮಕ್ಕಳ ಸಬಲೀಕರಣಕ್ಕೆ ಕಾರಣವಾಗುತ್ತದೆ. ಹೆಣ್ಣು ಸಮಾಜದತ್ತ ಕಣ್ಣು ತೆರೆದಾಗ ಶೋಷಣೆ ಮುಕ್ತ ಸಮಾಜ ನಿರ್ಮಾಣವಾಗುತ್ತದೆ. ಇಲ್ಲಿನ ಮಹಿಳೆಯರು ಒಟ್ಟುಗೂಡಿ ನಡೆಸುವ ಸಹಕಾರಿ ಸಂಘ ಹೆಣ್ಣುಮಕ್ಕಳ ಅಭ್ಯುದಯಕ್ಕೆ ಕಾರಣವಾಗುತ್ತದೆ ಎಂದರು.

ಅಧ್ಯಕ್ಷತೆಯನ್ನು ಸ್ಪಂದನ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಹಾಗೂ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಥಮ ಠೇವಣಿಪತ್ರ ಮತ್ತು ಪ್ರಥಮ ಪಾಲುಪತ್ರ ವಿತರಣೆಯನ್ನು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ನೆರವೇರಿಸಿದರು. ಪ್ರಥಮ ಸಾಲಪತ್ರ ವಿತರಣೆಯನ್ನು ಕಾಮಧೇನು ಸಹಕಾರಿ ಸಂಘದ ಅಧ್ಯಕ್ಷ ಮಾಧವ ಗೌಡ ಬೆಳ್ಳಾರೆ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಿವೃತ್ತ ಪ್ರಾಂಶುಪಾಲೆ ಡಾ.ರೇವತಿ ನಂದನ್, ಕ.ಸಾ.ಪ.ಅಧ್ಯಕ್ಷೆ ಮೀನಾಕ್ಷಿ ಗೌಡ, ಕವಿಯತ್ರಿ ಜಯಮ್ಮ ಚಟ್ಟಿಮಾಡ, ರಾಜಕೀಯ ಧುರೀಣೆ ರಾಜೀವಿ ರೈ ಮತ್ತಿತರ ಮಹಿಳೆಯರನ್ನು ಹಾಗೂ ಮಹಿಳಾ ಸಹಕಾರಿ ಸಂಘ ರಚನೆಗೆ ಸಹಕರಿಸಿದ ಕಾಮಧೇನು ಮಾಧವ ಗೌಡರನ್ನು ಸನ್ಮಾನಿಸಲಾಯಿತು.

ಸಹಕಾರಿ ಸಂಘಗಳ ಉಪನಿಬಂಧಕ ಬಿ.ಕೆ. ಸಲೀಂ, ರಾಜೀವ್ ಗಾಂಧಿ ಆರೋಗ್ಯ ವಿ.ವಿ.ಯ ಸಿಂಡಿಕೇಟ್ ಸದಸ್ಯ ಡಾ. ರಘು, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಪ್ಪ ಗೌಡ ಎಂ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಸುಳ್ಯ ಎ.ಪಿ.ಎಂ.ಸಿ ಅಧ್ಯಕ್ಷ ಜಾಕೆ ಮಾಧವ ಗೌಡ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಮೀನಾಕ್ಷಿ ಗೌಡ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಪರಶುರಾಮ ಚಿಲ್ತಡ್ಕ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ಧೀನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಧನಂಜಯ ಅಡ್ಪಂಗಾಯ, ಸಹಾಯಕ ಕಮಿಷನರ್ ಡಾ.ರಾಜೇಂದ್ರ ಕುಮಾರ್, ಎ.ಎಸ್ಪಿ.ರಿಷ್ಯಂತ್ ಅತಿಥಿಗಳಾಗಿ ಭಾಗವಹಿಸಿದ್ದರು.

ವೆಂಕಟರಮಣ ಸೊಸೈಟಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News