ಮೇ 25ಕ್ಕೆ ಪಿಯು ಫಲಿತಾಂಶ

Update: 2016-05-20 16:14 GMT

ಬೆಂಗಳೂರು, ಮೇ 20: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಮೇ 25ಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ಭದ್ರಾವತಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿ ರಂಜನ್‌ಅವರನ್ನು ಸನ್ಮಾನಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 25ರಂದು ಪಿಯು ಫಲಿತಾಂಶವನ್ನು ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News