ಕಾರು ಢಿಕ್ಕಿ: ಪಾದಚಾರಿ ಮೃತ್ಯು
Update: 2016-05-20 23:36 IST
ಕಾಪು, ಮೇ 20: ಉಳಿಯಾರಗೋಳಿ ಗ್ರಾಮದ ಬಿಕೋ ್ಯಾಕ್ಟರಿಯ ಬಳಿ ರಾ.ಹೆ.66ರಲ್ಲಿ ಮೇ 19ರಂದು ರಾತ್ರಿ 8:30ರ ಸುಮಾರಿಗೆ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.
ಮೃತರನ್ನು ಸ್ಥಳೀಯ ನಿವಾಸಿ ವಿಜಯ ಪೂಜಾರಿ ಎಂದು ಗುರುತಿಸಲಾಗಿದೆ. ಕಾಪು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಿಂತುಕೊಂಡಿದ್ದ ವಿಜಯ ಪೂಜಾರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಉಡುಪಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.