ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಪಡುಬಿದ್ರೆ, ಮೇ 20: ಮದ್ಯಪಾನ ಚಟ ಹಾಗೂ ಅನಾರೋಗ್ಯದಿಂದ ಮಾನಸಿಕವಾಗಿ ನೊಂದ ಇನ್ನಾ ಗ್ರಾಮದ ಕೊಡಿಮಾರು ನಿವಾಸಿ ಜಗನ್ನಾಥ (35) ಎಂಬವರು ಮೇ 19ರಂದು ಮನೆಯ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ಹೊಟ್ಟೆನೋವಿನಿಂದ ಬಳಲುತ್ತಿದ್ದ ವಡ್ಡರ್ಸೆಯ ಶಂಭು(39) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 19ರಂದು ರಾತ್ರಿ ವೇಳೆ ಮನೆಯ ಪಕ್ಕದಲ್ಲಿರುವ ನಿರ್ಮಾಣ ಹಂತದ ಮನೆಯ ಹಾಲ್‌ನ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಲ್ಯಾ ಗ್ರಾಮದ ಕೆಳಗಿನ ಮರಾಜೆ ನಿವಾಸಿ ಶಶಿಕಲಾ(40) ಎಂಬವರು ಮೇ 19 ರಂದು ರಾತ್ರಿ ವೇಳೆ ಮನೆಯ ಸ್ನಾನದ ಮನೆೆಯಲ್ಲಿ ಮೈಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.