ಎತ್ತಿನಹೊಳೆ ಯೋಜನೆ ನಿಲ್ಲಿಸದಿದ್ದರೆ ಜನ ಪಾಠ ಕಲಿಸುತ್ತಾರೆ: ಮುಖ್ಯಮಂತ್ರಿಗೆ ಪೂಜಾರಿ ಎಚ್ಚರಿಕೆ

Update: 2016-05-21 11:44 GMT

ಮಂಗಳೂರು,ಮೇ 21: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎತ್ತಿನಹೊಳೆ ಯೋಜನೆಯನ್ನು ಧೈರ್ಯ ಮಾಡಿ ನಿಲ್ಲಿಸದಿದ್ದರೆ ಜನರೇ ಸರಕಾರಕ್ಕೆ ಪಾಠ ಕಲಿಸುತ್ತಾರೆ ಎಂದು ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಸ್ವಯಂಪ್ರೇರಿತರಾಗಿ ಬಂದ್ ನಡೆಸಿದ್ದಾರೆ. ದೇಶದ ಚರಿತ್ರೆಯಲ್ಲಿಯೇ ಮೊದಲ ಬಾರಿಗೆ ಸ್ವಯಂಪ್ರೇರಿತ ಬಂದ್ ನಡೆದಿದೆ. ಜಿಲ್ಲೆಯ ಎಲ್ಲಾ ಧರ್ಮದ ಧಾರ್ಮಿಕ ಮುಖಂಡರುಗಳು, ಧರ್ಮಗುರುಗಳು, ಸ್ವಾಮೀಜಿಗಳು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಜಿಲ್ಲೆಯ ಜನರು ಬಂದ್ ಗೆ ಬೆಂಬಲ ಸೂಚಿಸಿ ಬಂದ್ ಯಶಸ್ವಿಗೊಳಿಸಿದ್ದಾರೆ. ಮುಖ್ಯಮಂತ್ರಿಗಳು ಇನ್ನಾದರೂ ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸಬೇಕು. ಈ ಬಗ್ಗೆ ಅವರು ಸಬೂಬು ಹೇಳುವುದನ್ನು ನಿಲ್ಲಿಸಬೇಕು ಎಂದರು.

ಎತ್ತಿನಹೊಳೆ ಯೋಜನೆ ಪರ ಮಾತನಾಡುತ್ತಿರುವ ಸಚಿವ ಯು.ಟಿ.ಖಾದರ್, ಜಿಲ್ಲೆಯ ಜನರನ್ನು ದಡ್ಡರೆಂದು ತಿಳಿದುಕೊಂಡಿರುವಂತಿದೆ. ಜನರು ಈ ಬಾರಿ ಎತ್ತಿನಹೊಳೆ ಯೋಜನೆ ಜಾರಿಗೆ ಬೆಂಬಲಿಸುವವರನ್ನು ಸೋಲಿಸಲು ನಿರ್ಧರಿಸಿದ್ದು ಈ ಬಗ್ಗೆ ಖಾದರ್ ತಿಳಿದುಕೊಳ್ಳಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News