ಸಿದ್ಧಕಟ್ಟೆ: ಕುಸಿದು ಬಿದ್ದು ವ್ಯಕ್ತಿ ಸಾವು
Update: 2016-05-21 19:09 IST
ಬಂಟ್ವಾಳ, ಮೇ 21: ತಾಲೂಕಿನ ಆರಂಬೋಡಿ ನಿವಾಸಿ ಅನಿಲ್ ರಾಡ್ರಿಗಸ್(37) ಎಂಬವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಅವಿವಾಹಿತರಾಗಿದ್ದ ಇವರು ಮಂಗಳೂರಿನ ಹೋಟೆಲೊಂದರಲ್ಲಿ ಉದ್ಯೋಗದಲ್ಲಿದ್ದರು. ಸಂಜೆ ಸಿದ್ಧಕಟ್ಟೆ ಬಳಿ ಆರಂಬೋಡಿ ಮನೆಗೆ ಹೋಗುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಳಿಕ ಅವರು ಸಾವನ್ನಪ್ಪಿದ್ದಾರೆ.
ಮೃತರ ಅಂತ್ಯಕ್ರಿಯೆ ಶನಿವಾರ ತಾಕೊಡೆ ಚರ್ಚಿನ ಬಳಿ ನಡೆದಿದೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.