×
Ad

ಸಿಬಿಎಸ್‌ಇ: ನವೋದಯ, ಕಾರ್ಮೆಲ್, ಲೂರ್ಡ್ಸ್, ಪಣಂಬೂರಿನ ಕೇಂದ್ರೀಯ ವಿದ್ಯಾಲಯಗಳಿಗೆ ಶೇ. 100 ಫಲಿತಾಂಶ

Update: 2016-05-21 20:10 IST

ಮಂಗಳೂರು, ಮೇ 21: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ)12ನೆ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು ನವೋದಯ ವಿದ್ಯಾಲಯ, ಮಂಗಳೂರು ಪಣಂಬೂರು ಕೇಂದ್ರೀಯ ವಿದ್ಯಾಲಯ 1 ಮತ್ತು 2ರಲ್ಲಿ ಹಾಗೂ ವೌಂಟ್ ಕಾರ್ಮೆಲ್ ,ಲೂರ್ಡ್ಸ್ ಶಾಲೆಯ ಶೇ 100 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

  ಮುಡಿಪು ನವೋದಯ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 45 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 4 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಅಧಿಕ ಅಂಕಗಳಿಸಿದ್ದಾರೆ. ಈ ಶಾಲೆಯಲ್ಲಿ 482 ಅಂಕ ಗಳಿಸಿದ ಶ್ವೇತಾ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪಣಂಬೂರಿನ ಕೇಂದ್ರೀಯ ವಿದ್ಯಾಲಯ 1ರಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 57 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ. ತೇಜಸ್ ಸಿ.ಎಸ್. 500ರಲ್ಲಿ 475 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕೇಂದ್ರೀಯ ವಿದ್ಯಾಲಯ ಎರಡರಲ್ಲಿ 25 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅಶ್ವಿನಿ.ಕೆ.ಎಸ್.435 ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ.

ಮೇರಿ ಹಿಲ್‌ನಲ್ಲಿರುವ ವೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್‌ನ ಎರಡನೆ ಬ್ಯಾಚ್‌ನ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಎಲ್ಲಾ 17 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಿಖಿತಾ ಚೌಧುರಿ ವಿಜ್ಞಾನ ವಿಭಾಗದಲ್ಲಿ ಶೇ. 90.6 ಹಾಗೂ ರಾಧಿಕಾ ಬನ್ಸಾಲ್ ವಾಣಿಜ್ಯ ವಿಭಾಗದಲ್ಲಿ ಶೇ. 95 ಅಂಕ ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಹಾಜರಾದ 10 ವಿದ್ಯಾರ್ಥಿಗಳ ಪೈಕಿ 7 ಮಂದಿ ವಿಶಿಷ್ಠ ಶ್ರೇಣಿಯಲ್ಲಿ ಹಾಗೂ ವಾಣಿಜ್ಯ ವಿಭಾಗದ 7 ವಿದ್ಯಾರ್ಥಿಗಳ ಪೈಕಿ 3 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಉಳಿದವರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಬಿಜೈಯ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳ ಪೈಕಿ 54 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಆಂಡ್ರೈನ್ ಜೊಸೆಫ್ ಆಳ್ವ 96.8 ಶೇ.ಅಂಕ ಗಳಿಸಿ ಪ್ರಥಮ ಸ್ಥಾನಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News