×
Ad

ಭಯೋತ್ಪಾದನಾ ವಿರೋಧಿ ದಿನಾಚರಣೆ: ಪ್ರಮಾಣ ವಚನ ಸ್ವೀಕಾರ

Update: 2016-05-21 21:49 IST

ಮಡಿಕೇರಿ, ಮೇ 21: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರ ಉಪಸ್ಥಿತಿಯಲ್ಲಿ ಶನಿವಾರ ಭಯೋತ್ಪಾದನಾ ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಪ್ರತಿಜ್ಞಾವಿಧಿ ಬೋಧಿಸಿದ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್, ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸಬೇಕೆಂದು ಕರೆ ನೀಡಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚಿತ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಅವರು ಪ್ರತಿಜ್ಞೆಯನ್ನು ಬೋಧಿಸಿದರು. ಮಣಜೂರು ಮಂಜುನಾಥ್ ಮಾತನಾಡಿ, ರಾಜೀವ್ ಗಾಂಧಿ ಅವರು ತಮಿಳುನಾಡಿನ ಪೆರಂಬೂರಿನಲ್ಲಿ ಮಾನವ ಬಾಂಬ್ ದಾಳಿಗೆ ಸಿಲುಕಿ ಮರಣ ಹೊಂದಿದ ದಿನವನ್ನು ಭಯೋತ್ಪಾದನಾ ವಿರೋಧ ದಿನವನ್ನಾಗಿ ಆಚರಿಸಲಾಗುತ್ತ್ತಿದೆ ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್.ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಜಯರಾಮ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಿರಸ್ತೆದಾರ್ ಪ್ರಕಾಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಜ್ಞ್ಞಾ ವಿಧಿ ಸ್ವೀಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News