ಗೂಂಡಾ ಕಾಯ್ದೆಯಡಿಯಲ್ಲಿ ಬಂಧನ
Update: 2016-05-21 21:53 IST
ಮಂಗಳೂರು, ಮೇ 20: ಉಳ್ಳಾಲದ ಮೊಗವೀರಪಟ್ಣ ನಿವಾಸಿ ರಾಹುಲ್ ಪೂಜಾರಿ (22)ಎಂಬಾತನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ರಾಹುಲ್ ವಿರುದ್ಧ 2014ರಿಂದ ಉಳ್ಳಾಲ ಪೊಲಿಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ ದೊಂಬಿ, ಕೊಲೆಗೆ ಯತ್ನ ಮತ್ತು ಕೊಲೆ ಪ್ರಕರಣಗಳು ಸೇರಿವೆ. ಈತನನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಪೊಲೀಸ್ ನಿರೀಕ್ಷಕರು, ಸಂಬಂಧಪಟ್ಟ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಉಪ ಪೊಲೀಸ್ ಆಯುಕ್ತರ ವರದಿಯ ಆಧಾರದ ಮೇರೆಗೆ ನಗರ ಪೊಲೀಸ್ ಆಯುಕ್ತರು ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದ ಆಜ್ಞೆಯನ್ನು ಹೊರಡಿಸಿದ್ದಾರೆ.