×
Ad

ಮಾಜಿ ಪ್ರಧಾನಿ ದಿ. ರಾಜೀವ ಗಾಂಧಿ ಪುಣ್ಯತಿಥಿ ಕಾರ್ಯಕ್ರಮ

Update: 2016-05-22 16:11 IST

ಪುತ್ತೂರು, ಮೇ 22: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಮರ್ಥ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿದ್ದು, ದೇಶಕ್ಕಾಗಿ ಹುತಾತ್ಮರಾದ ಮಹಾನ್ ವ್ಯಕ್ತಿ ಎಂದು ಪುತ್ತೂರು ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿ ಹೇಳಿದರು.

 ಅವರು ಶನಿವಾರ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲಿ ಮಾಜಿ ಪ್ರಧಾನಿ ದಿ. ರಾಜೀವ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಾರತೀಯ ದೂರಸಂಪರ್ಕ ವ್ಯವಸ್ಥೆಯಲ್ಲಿ ಹೊಸ ಶಕೆ ಆರಂಭವಾಗಲು ಕಾರಣರಾಗಿರುವ ರಾಜೀವ ಗಾಂಧಿ ಅವರ ಅಧಿಕಾರ ಅವಧಿಯಲ್ಲಿ ಭಾರತವನ್ನು ಜಗತ್ತಿನ ಬಲಿಷ್ಠ ರಾಷ್ಟ್ರವನ್ನಾಗಿಸುವ ಕನಸು ಕಂಡಿದ್ದರು. ಅವರು ದೇಶಕ್ಕಾಗಿ ಹುತಾತ್ಮರಾದರು. ಅವರ ಆದರ್ಶ ಮತ್ತು ಹೊಸತನದ ಪ್ರೇರಣೆ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಪೂರ್ತಿಯಾಗಿದೆ. ರಾಜೀವ ಗಾಂಧಿ ಅವರ ಕನಸುಗಳನ್ನು ನನಸಾಗಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಅವಿರತ ಪ್ರಯತ್ನ ನಡೆಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮೊದೀನ್ ಅರ್ಷದ್ ದರ್ಬೆ, ಪ್ರಮುಖರಾದ ಶಶಿಕಿರಣ್ ರೈ ನೂಜಿಬೈಲು, ಸಮರ್ಥ ರೈ, ಬೋಳೋಡಿ ಚಂದ್ರಹಾಸ ರೈ, ನಿರ್ಮಲ್ ಕುಮಾರ್ ಜೈನ್, ರೋಶನ್ ರೈ ಬನ್ನೂರು, ಮಾಜಿ ಪುರಸಭಾ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹೇಶ್ ರೈ ಅಂಕೊತ್ತಿಮಾರು, ನ್ಯಾಯವಾದಿ ಶೀನಪ್ಪ ಗೌಡ ಬೈತಡ್ಕ, ವಿಕ್ರಂ ರೈ ಸಾಂತ್ಯ, ಯಾಕೂಬ್, ಕುಂಬ್ರ ದುರ್ಗಾ ಪ್ರಸಾದ್ ರೈ ಮತ್ತಿತರರು ಉಪಸ್ಥಿತರಿದ್ದರು. ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ಕಾಂಗ್ರೆಸ್ ಸೇವಾದಳದ ಜೋಕಿಂ ಡಿಸೋಜ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News