ಭಿಕ್ಷಾಟನೆಗೆ ನಿಷೇಧ
Update: 2016-05-22 23:46 IST
ಮಂಗಳೂರು, ಮೇ 22: ಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆ-1975ರ ಅನ್ವಯ ಭಿಕ್ಷಾಟನೆ ಮಾಡುವುದನ್ನು ನಿಷೇಧಿಸಲಾಗಿದೆ. ಹಾಗೂ ಅಂತಹ ವರನ್ನು ಸೆಕ್ಷನ್ 11ರಂತೆ ಬಂಧಿಸಲಾ ಗುವುದು ಎಂದು ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಎಚ್ಚರಿಸಿದ್ದಾರೆ.
ಜಿಲ್ಲೆಯ ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡು ತ್ತಿರುವುದು ಕಂಡು ಬರುತ್ತಿದ್ದು, ಇದರ ಹಿಂದೆ ವ್ಯವಸ್ಥಿತ ಜಾಲ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿದೆ. ಆದುದರಿಂದ ಸಾರ್ವಜನಿ ಕರು, ಸಂಘ-ಸಂಸ್ಥೆಗಳು ಹಾಗೂ ಧಾರ್ಮಿಕ ಕೇಂದ್ರಗಳು ಭಿಕ್ಷಾಟನೆಗೆ ಪ್ರೋತ್ಸಾಹ ನೀಡಬಾರದು. ಭಿಕ್ಷಾಟನೆ ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ತಿಳಿಸುವಂತೆ ಅವರು ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.