ಮಂಗಳೂರು ವಿವಿ ಹಣಕಾಸು ಅಧಿಕಾರಿ ಪ್ರೊ.ಪಿ.ಎ.ರೇಗೋ ಹೃಧಯಾಘಾತದಿಂದ ನಿಧನ

Update: 2016-05-23 09:42 GMT

ಕೊಣಾಜೆ, ಮೇ 23: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹಣಕಾಸು ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೊ. ಪೌಲ್ ಅಲೆಕ್ಸಾಂಡರ್ ರೇಗೋ ಅವರು ಹೃದಯಾಘತದಿಂದ ಇಂದು ಬೆಳಿಗ್ಗೆ ನಿಧನರಾದರು.
 

ಕಳೆದ 33 ವರ್ಷಗಳ ಅದ್ಯಾಪನಾ ವೃತ್ತಿಯ ಅನುಭವವನ್ನು ಹೊಂದಿರುವ ಅವರು ವಿವಿಯ ಅರ್ಥಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಹಾಗೂ ವಿವಿಯ ಪ್ರಮುಖ ಆಡಳಿತ ವಿಭಾಗದಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದರು. ಅಲ್ಲದೆ ಮಂಗಳೂರು ವಿವಿಯ ಅಂಚೆ ತೆರಪಿನ ಶಿಕ್ಷಣ ಇಲಾಖೆಯಲ್ಲೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿರುತ್ತಾರೆ. ಕಳೆದ ವರ್ಷದಿಂದ ಅವರು ಮಂಗಳೂರು ವಿವಿಯ ಹಣಕಾಸು ಅಧಿಕಾರಿಯಾಗಿ ನಿಯುಕ್ತಿಗೊಂಡಿದ್ದರು.

ಕಳೆದ ನಾಲ್ಕು ದಿನದ ಹಿಂದೆ ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ