×
Ad

ಐಟಿಐಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Update: 2016-05-23 23:39 IST

   

ಮಂಗಳೂರು, ಮೇ 23: ಉದ್ಯೋಗ ಮತ್ತು ತರಬೇತಿ ಇಲಾ ಖೆಯು ರಾಜ್ಯದ ಸರಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್-2016ನೆ ಶೈಕ್ಷಣಿಕ ಸಾಲಿನ ಪ್ರವೇಶ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಲು ಸರಕಾರಿ ಅಸೂಚನೆ ಹೊರಡಿಸಿದೆ. ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರವೇಶ ಬಯಸುವ ಆಸಕ್ತ ಅಭ್ಯರ್ಥಿಗಳು ಮೇ 23ರಿಂದ ಜೂನ್ 6 ರವರೆಗೆ ರಾಜ್ಯದ ಯಾವುದೇ ಪ್ರದೇಶದಿಂದ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಕೋರ್ಸ್/ವೃತ್ತಿಗಳಿಗೆ ಇಲಾಖೆಯ ವೆಬ್ ಸೈಟ್ www.emptrg.kar.nic.in ಅಥವಾ www.detkarnataka.org.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಕದ್ರಿಹಿಲ್ಸ್‌ನ ಸರಕಾರಿ ಐಟಿಐ ಸಂಸ್ಥೆಯನ್ನು ಖುದ್ದಾಗಿ ಅಥವಾ ದೂ.ಸಂ.:0824-2211285ರ ಮೂಲಕ ಸಂಪರ್ಕಿಸಬಹುದಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಂಸ್ಥೆಯಲ್ಲಿ ಉಚಿತ ವ್ಯವಸ್ಥೆಗೊಳಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News