×
Ad

ಪ್ರತಿಷ್ಠಿತ ಶಾಲೆಗಳಿಗೆ ಎಸ್ಸಿ ವಿದ್ಯಾರ್ಥಿಗಳ ಸೇರ್ಪಡೆಗೆ ಅರ್ಜಿ ಆಹ್ವಾನ

Update: 2016-05-23 23:39 IST


 ಮಂಗಳೂರು, ಮೇ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೆ ತರಗತಿಗೆ ದಾಖಲಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾರದಾ ಗಣಪತಿ ವಿದ್ಯಾಕೇಂದ್ರ, ಪದವಿಪೂರ್ವ ಕಾಲೇಜು, ನಗರ, ಕೈರಂಗಳ ಅಂಚೆ, ಬಂಟ್ವಾಳ ತಾಲೂಕು, ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ವಿಟ್ಲ ಜೆಸಿ ಆಂಗ್ಲ ಮಾಧ್ಯಮ ಶಾಲೆ, ಬಸವನ ಗುಡಿ, ವಿಟ್ಲ, ಬಂಟ್ವಾಳ ಎಸ್‌ವಿಎಸ್ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ ಬಂಟ್ವಾಳ, ಶಾರದಾ ವಿದ್ಯಾಲಯ, ಕೊಡಿಯಾಲ್‌ಬೈಲ್ ಈ ಶಾಲೆಗಳಿಗೆ ಸೇರಲು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದ.ಕ.ಮಂಗಳೂರು, ದೂರವಾಣಿ ಸಂಖ್ಯೆ: 0824-2451237 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News