×
Ad

ಪ್ರಾಕೃತಿಕ ವಿಕೋಪ ಪರಿಹಾರಕ್ಕಾಗಿ 1.3 ಕೋಟಿ ರೂ. ಬಿಡುಗಡೆ

Update: 2016-05-24 13:39 IST

ಮಂಗಳೂರು, ಮೇ 24: ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಗಾಳಿ ಸಹಿತ ಬಿದ್ದ ಮಳೆಯಿಂದಾಗಿ ಮನೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪ ನಿಧಿಯಡಿ 1.3 ಕೋಟಿ ರೂ. ಅನುದಾನವನ್ನು ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರಿಗೆ ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯ ವಿವಿಧೆಡೆ ಮನೆಗಳಿಗೆ ಹಾನಿಯಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಬೀಸಿದ ಬಿರುಗಾಳಿಯಿಂದಾಗಿ ಹೆಚ್ಚಿನ ಮನೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಮಂಗಳೂರು, ಬೆಳ್ತಂಗಡಿ, ಪುತ್ತೂರು, ಸುಳ್ಯ ತಹಶೀಲ್ದಾರರಿಗೆ ತಲಾ 15 ಲಕ್ಷ ರೂ., ಬಂಟ್ವಾಳ ತಹಶೀಲ್ದಾರರಿಗೆ 50 ಲಕ್ಷ ರೂ., ಕಡಬ, ಮೂಡಬಿದಿರೆ ವಿಶೇಷ ತಹಶೀಲ್ದಾರರಿಗೆ ತಲಾ 10 ಲಕ್ಷ ರೂ. ಬಿಡುಗಡೆ ಮಾಡಲಾಗಿದ್ದು, ಮುಂದಿನ ಎರಡು ದಿನಗಳೊಳಗಾಗಿ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಹಾನಿ ಸಂಭವಿಸಿದ 24 ಗಂಟೆಯೊಳಗೆ ಪರಿಹಾರ ಪಾವತಿ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಶೀಲಾರರಿಗೆ ನಿರ್ದೇಶನನಿರ್ದೇಶ ನೀಡಬೇಕು. ಅಲ್ಲದೇ ಬಂಟ್ವಾಳ ತಾಲೂಕಿನಲ್ಲಿ ಆಗಿರುವ ಹಾನಿಯ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆಸಿ ಗ್ರಾಮವಾರು ಪ್ರಸ್ತಾವನೆ ಸಲ್ಲಿಸುವಂತೆ ಈಗಾಗಲೇ ಮಂಗಳೂರು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News