×
Ad

ಪಂಚ ಭಾಷಾ ಅಕಾಡಮಿಗಳ ಸಾಹಿತ್ಯ, ಸಾಂಸ್ಕೃತಿಕ ಸಮ್ಮಿಲನ

Update: 2016-05-24 14:54 IST

ಮಡಿಕೇರಿ, ಮೇ 24: ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಮಡಿಕೇರಿ ಇದರ ಸಹಯೋಗದಲ್ಲಿ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ, ಕರ್ನಾಡಕ ಬ್ಯಾರಿ ಸಾಹಿತ್ಯ ಅಕಾಡಮಿ ಮಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮಂಗಳೂರು, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಮಂಗಳೂರು ಪಂಚ ಭಾಷಾ ಅಕಾಡಮಿಗಳ ಸಾಹಿತ್ಯ ಸಾಂಸ್ಕೃತಿಕ ಸಮ್ಮಿಲನವು ಇಂದು ಕ್ರಿಸ್ಟಲ್ ಕೋರ್ಟ್ ಸಭಾಂಗಣ ಮಡಿಕೇರಿಯಲ್ಲಿ ಜರಗಿತು. 

ಕಾರ್ಯಕ್ರಮವನ್ನು ಹಿರಿಯ ಸಾಹಿತಿ ನಾಡೊಜ ಡಾ. ಪಂ.ಪ. ನಾಗರಾಜಯ್ಯ ಉದ್ಘಾಟಿಸಿದರು. 

ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಹಲವು ಸಾಹಿತಿಗಳು, ಗಣ್ಯರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News