ಅಸ್ಸಾಂನಲ್ಲಿ ಮುಖ್ಯ ಮಂತ್ರಿಯಾಗಿ ಸೋನೊವಾಲ್ ಪ್ರಮಾಣ
Update: 2016-05-24 16:49 IST
ಹೊಸದಿಲ್ಲಿ, ಮೇ 24: ಅಸ್ಸಾಂನಲ್ಲಿ ಮುಖ್ಯ ಮಂತ್ರಿಯಾಗಿ ಬಿಜೆಪಿಯ ಸರ್ಬಾನಂದ ಸೋನೊವಾಲ್ ಇಂದು ಪ್ರಮಾಣವಚನ ಸ್ವೀಕರಿಸಿದರು.
ಇದರೊಂದಿಗೆ ಅಸ್ಸಾಂನಲ್ಲಿ ಮೊದಲ ಬಿಜೆಪಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದಿದೆ.
ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಬಿಜೆಪಿಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರುಗಳು ಭಾಗವಹಿಸಿದ್ದರು.