ನರೇಶ್ ಶೆಣೈ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 30ಕ್ಕೆ ಮುಂದೂಡಿಕೆ
Update: 2016-05-24 21:17 IST
ಮಂಗಳೂರು, ಮೇ 24 : ಆರ್‌ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ನಮೋಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 30ಕ್ಕೆ ಮುಂದೂಡಿದೆ.
ವಿನಾಯಕ್ ಬಾಳಿಗಾ ಹತ್ಯೆಯ ನಂತರ ತಲೆಮರೆಸಿಕೊಂಡಿರುವ ನರೇಶ್ ಶೆಣೈ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ. ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃಗೊಂಡಿತ್ತು.
ನಂತರ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆಯನ್ನು ಮೇ 30ಕ್ಕೆ ಮುಂದೂಡಲಾಗಿದೆ.