×
Ad

ಗಣತಿ ವರದಿಯನ್ನು ಪ್ರಕಟಿಸುವುದು ಅನಿವಾರ್ಯ: ಜಾರಕಿ ಹೊಳಿ

Update: 2016-05-24 22:22 IST

ಮಡಿಕೇರಿ, ಮೇ 24: ಸರಕಾರದ ಸೌಲಭ್ಯಗಳು ಅರ್ಹ ಫಲಾನುಭವಿ ಗಳಿಗೆ ಸಕಾಲದಲ್ಲಿ ತಲುಪಬೇಕೆನ್ನುವ ಉದ್ದೇಶದಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯನ್ನು ನಡೆಸಲಾಗಿದ್ದು, ಇದರ ವರದಿಯನ್ನು ಪ್ರಕಟಿಸುವುದು ಅನಿವಾರ್ಯ ವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಹಳಷ್ಟು ಸಮುದಾಯಗಳು ಸರಕಾರಿ ಸೌಲಭ್ಯದಿಂದ ವಂಚಿತವಾಗಿದೆ. ಸರಕಾರದ ಕಾರ್ಯಕ್ರಮಗಳನ್ನು ಸಮಾಜದ ಎಲ್ಲ ವರ್ಗಗಳಿಗೂ ಪರಿಣಾಮಕಾರಿಯಾಗಿ ತಲುಪಿಸುವ ಅಗತ್ಯವಿದೆ. ಆದ್ದರಿಂದ ವರದಿ ಪ್ರಕಟಿಸುವುದು ಅನಿವಾರ್ಯವಾಗಿದೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News