ಬೆಥನಿ ಪದವಿ ಪೂರ್ವ ಕಾಲೇಜಿಗೆ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ

Update: 2016-05-25 12:05 GMT

ಕಡಬ, ಮೇ 25: 2015-16ನೆ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನೂಜಿಬಾಳ್ತಿಲ ಬೆಥನಿ ಪ.ಪೂ.ಕಾಲೇಜಿಗೆ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.100 ಪಲಿತಾಂಶ ಬಂದಿದೆ.

ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ ಕಲಾ ವಿಭಾಗದ 36 ವಿದ್ಯಾರ್ಥಿಗಳಲ್ಲಿ ನವ್ಯ 550 ಅಂಕ ಗಳಿಸುವುದರೊಂದಿಗೆ ತಾಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿ ಉಳಿದ 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

 ವಾಣಿಜ್ಯ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ. ಆಶಾ ಪಿ.ಜೆ. 480 ಅಂಕ ಗಳಿಸಿರುತ್ತಾಳೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.55 ಫಲಿತಾಂಶ ದಾಖಲಾಗಿರುತ್ತದೆ. ಪ್ರೇಮಶ್ರೀ 403 ಅಂಕಗಳನ್ನು ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News