ಬೈಕ್-ಕಾರು ಮಧ್ಯೆ ಢಿಕ್ಕಿ: ಮೂವರಿಗೆ ಗಂಭೀರ ಗಾಯ
Update: 2016-05-25 20:01 IST
ಪುತ್ತೂರು, ಮೇ 25: ಬೈಕ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಸಮೀಪ ಮಂಗಳವಾರ ಸಂಭವಿಸಿದೆ.
ಬೈಕ್ ಚಲಾಯಿಸುತ್ತಿದ್ದ ಬಾಯಾರು ನಿವಾಸಿ ಪ್ರಶಾಂತ್(24) ಎಂಬವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದ ಗಾಯಾಳುಗಳಾದ ಪುತ್ತೂರು ನಗರದ ಬೊಳುವಾರು ಸಮೀಪದ ಉರ್ಲಾಂಡಿ ನಾಯರಡ್ಕ ನಿವಾಸಿ ಮಾಂಕು ಅವರ ಪುತ್ರ ಪ್ರವೀಣ್(25) ನೆಕ್ಕಿಲು ನಿವಾಸಿ ಅಜಿಗ(44) ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಕಡೆ ತೆರಳುತ್ತಿದ್ದ ಕಾರು ಮತ್ತು ಬಜಾಜ್ ಡಿಸ್ಕವರ್ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದವರು ಗಾಯಗೊಂಡಿದ್ದಾರೆ.