×
Ad

ಪಿಯುಸಿ: ಪುತ್ತೂರು ತಾಲೂಕಿನ ಕಾಲೇಜುಗಳಿಗೆ ಉತ್ತಮ ಫಲಿತಾಂಶ

Update: 2016-05-25 23:16 IST

ಪುತ್ತೂರು, ಮೇ 25: 2015-16ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರು ತಾಲೂಕಿನ ಬಹುತೇಕ ಕಾಲೇಜ್‌ಗಳು ಉತ್ತಮ ಫಲಿತಾಶ ಪಡೆದುಕೊಂಡಿದೆ.

ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜು 92 ಶೇ., ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು 99ಶೇ.. ಕೆಯ್ಯೂರು ಸರಕಾರಿ ಪ.ಪೂ. ಕಾಲೇಜ್ 86.68ಶೇ., ಬೆಟ್ಟಂಪಾಡಿ ಸರಕಾರಿ ಪ.ಪೂ. ಕಾಲೇಜ್ 83ಶೇ. ಫಲಿತಾಂಶ ಪಡೆದುಕೊಂಡಿದೆ.

ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜ್‌ನ ಕಲಾ ವಿಭಾಗದಲ್ಲಿ ಶೇ.97 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ. ಚೈತ್ರಾ 520 ಅಂಕ ಪಡೆದು ಗರಿಷ್ಠ ಸ್ಥಾನದಲ್ಲಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 54 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇ. 97 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 15 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ 87 ಫಲಿತಾಂಶ ಲಭಿಸಿದೆ.

ಮರ್ಕಝುಲ್ ಹುದಾ ಮಹಿಳಾ ಕಾಲೇಜಿಗೆ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ಲಭಿಸಿದೆ. 67 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 8 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ. ಸಾರತ್ ಸ್ವಾಬಿರಾ (561) ಫಾತಿಮತ್ ಆಶುರಾ(557) ಜೈನಾಬಿ(553) ಖತೀಜತ್ ಝಕಿಯ್ಯ (547) ಸಾಜಿದಾ(543) ಫಾತಿಮತ್ ಆಶಿಕ (530) ಸಾಜಿದಾ ಎ(514) ಶಬೀಬಾ(512) ಅಂಕಗಳನ್ನು ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 32 ಮಂದಿ ತೇರ್ಗಡೆ ಹೊಂದಿದ್ದು ಶೇ.97 ಫಲಿತಾಂಶವನ್ನು ಪಡೆದುಕೊಂಡಿವೆ.

 ಕೆಯ್ಯೂರು ಸರಕಾರಿ ಪ.ಪೂ. ಕಾಲೇಜ್‌ನಲ್ಲಿ ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇ. 88 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ 4 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.75 ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 30 ವಿದ್ಯಾರ್ಥಿಗಳ ಪೈಕಿ 20 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.67 ಫಲಿತಾಂಶ ಲಭಿಸಿದೆ. ಸಾಹಿತ್ಯ 544 ಅಂಕ ಪಡೆದು ಪ್ರಥಮ ಸ್ಥಾನದಲ್ಲಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳ ಪೈಕಿ 52 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇ.88 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 14 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನೆಬಿಸತುಲ್ ಪರ್ಝಾನ 514 ಅಂಕಗಳನ್ನು ಪಡೆದು ಪ್ರಥಮ ಸ್ಥಾನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News