×
Ad

ವಿವಿ ಅಕಾಡಮಿಕ್ ಕೌನ್ಸಿಲ್ ಸದಸ್ಯರಾಗಿ ಐವನ್ ನೇಮಕ

Update: 2016-05-27 23:11 IST

ಮಂಗಳೂರು, ಮೇ 27: ಮಂಗಳೂರು ವಿಶ್ವವಿದ್ಯಾನಿಲಯದ ಅಕಾಡಮಿಕ್ ಕೌನ್ಸಿಲ್ ಸದಸ್ಯರನ್ನಾಗಿ ವಿಧಾನ ಪರಿಷತ್‌ನ ಸದಸ್ಯ ಐವನ್ ಡಿಸೋಜರನ್ನು ಸಭಾಪತಿಯವರು ನಾಮನಿರ್ದೇಶನ ಮಾಡಿ ನೇಮಕ ಮಾಡಿ ಆದೇಶ ನೀಡಿದ್ದಾರೆ.

ಐವನ್ ಡಿಸೋಜ ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್, ಸಿಂಡಿಕೇಟ್ ಮತ್ತು ಅಕಾಡಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಇವರ ನೇಮಕಾತಿಯು ಮುಂದಿನ ಆದೇಶದವರೆಗೆ ಆಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News