ವಿಶ್ವೇಶ್ವರಯ್ಯ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

Update: 2016-05-27 18:09 GMT

ಬೆಂಗಳೂರು, ಮೇ 27: ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿ ಷ್ಠಾನ ಟ್ರಸ್ಟ್‌ನ 24 ನೆ ವಾರ್ಷಿಕೋತ್ಸವದ ಅಂಗವಾಗಿ ನೀಡಲಿರುವ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ಗೆ ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
2014-15 ನೆ ಸಾಲಿನಲ್ಲಿ ಪ್ರಕಟವಾದ ಕಥಾ ಸಂಕಲನ, ನಾಟಕ, ವಿಮರ್ಶೆ, ಕಾದಂಬರಿ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ವೈಚಾರಿಕ ಸಾಹಿತ್ಯ, ಅನುವಾದ ಸಾಹಿತ್ಯ, ಚುಟುಕು ಸಾಹಿತ್ಯ ಹಾಗೂ ಇನ್ನಿತರ ಕೃತಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಕಳುಹಿಸಿದ ಕೃತಿಗಳಲ್ಲಿ 10 ಕೃತಿಗಳನ್ನು ಆಯ್ಕೆ ಮಾಡಿ, ವಿಶ್ವೇಶ್ವರಯ್ಯ ಜನ್ಮ ದಿನವಾದ ಸೆ.15 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ರಮೇಶ ಸುರ್ವೆ ಪ್ರಕಟನೆಯಲ್ಲಿ ತಿಳಿಸಿದ್ದಾರೆರ್. ಸಲ್ಲಿಸುವ ಲೇಖಕರು ಜುಲೈ 30 ರೊಳಗೆ ಪುಸ್ತಕದ 3 ಪ್ರತಿ, 2 ಭಾವ ಚಿತ್ರ, ಸಂಪೂರ್ಣ ಸ್ವವಿವರವನ್ನು, ರಮೇಶ ಸುರ್ವೆ, ಅಧ್ಯಕ್ಷರು, ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್, ನಂ.468, 13 ನೆ ಮುಖ್ಯರಸ್ತೆ, 3 ನೆ ಹಂತ, ಮಂಜುನಾಥನಗರ, ಬೆಂಗಳೂರು-560010 ಇಲ್ಲಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News