ಉಡುಪಿ ಜಿಲ್ಲಾಧಿಕಾರಿ ಡಾ.ವಿಶಾಲ್ ವರ್ಗಾವಣೆ ಬೇಡ: ಮುಖ್ಯಮಂತ್ರಿಗೆ ದಸಂಸ ಮನವಿ

Update: 2016-05-27 18:11 GMT


ಉಡುಪಿ, ಮೇ 27: ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ದಕ್ಷ ಹಾಗೂ ಪ್ರಾಮಾ ಣಿಕ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಡಾ.ವಿಶಾಲ್ ಆರ್. ಅವರನ್ನು ವರ್ಗಾವಣೆ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವುದಾಗಿ ಕರ್ನಾಟಕ ರಾಜ್ಯ ದಸಂಸ ಉಡುಪಿ ಜಿಲ್ಲಾ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ, ನ್ಯಾಯವಾದಿ ಟಿ.ಮಂಜುನಾಥ ಗಿಳಿಯಾರು ತಿಳಿಸಿದ್ದಾರೆ.

ಇಂದಿಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ವಿಶಾಲ್ ಜಿಲ್ಲಾಧಿಕಾರಿಯಾಗಿ ಬಂದ ಮೇಲೆ ಜಿಲ್ಲೆಯಲ್ಲಿ ದಲಿತ ಸಮು ದಾಯಗಳ ಅಭಿವೃದ್ಧಿ ಕೆಲಸಗಳನ್ನು ಅತ್ಯಂತ ಮುತುವರ್ಜಿಯಿಂದ ನಿರ್ವ ಹಿಸಿ, ಶೋಷಿತ ಸಮುದಾಯಗಳ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲಬಾರಿಗೆ 20 ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಸಾಂಪ್ರದಾಯಿಕ ಮರಳುಗಾರಿಕೆಗೆ ಪರವಾನಿಗೆ ನೀಡಿದ್ದು, ಇದೊಂದು ಮಹತ್ವಪೂರ್ಣ ಹೆಜ್ಜೆಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕುಂದಾಪುರ ತಾಲೂಕು ಸಂಚಾಲಕ ರಾಜು ಬಿ., ಉಡುಪಿ ತಾಲೂಕು ಸಂಘಟನಾ ಸಂಚಾಲಕ ಉತ್ತೇಶ ಹೊಸಾಳ, ಜಿಲ್ಲಾ ಸಂಚಾಲಕ ಚಂದ್ರ ಹಳಗೇರಿ ಹಾಗೂ ವಾಸುದೇವ ಮಧೂರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News