×
Ad

ಜಿಟಿಟಿಸಿ ತರಬೇತಿಗಾಗಿ ಅರ್ಜಿ ಆಹ್ವಾನ

Update: 2016-05-27 23:51 IST

ಬೆಂಗಳೂರು, ಮೇ 27: ಬೆಂಗಳೂರು ನಗರದ ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಎಸೆಸೆಲ್ಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 4 ವರ್ಷಗಳ ಅವಧಿಯ ವಿವಿಧ ಡಿಪ್ಲೋಮಾ ಕೋರ್ಸ್‌ಗಳಿಗೆರ್ ಗಳನ್ನು ಆಹ್ವಾನಿಸಲಾಗಿದೆ.

    ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಸರ್ಟಿಫಿಕೇಟ್ ಡಿಪ್ಲೋಮಾ ಇನ್ ಟೂಲ್ ಮ್ಯಾನ್ಯುಫ್ಯಾಕ್ಚರಿಂಗ್, ಸರ್ಟಿಫಿಕೇಟ್ ಡಿಪ್ಲೋಮಾ ಇನ್ ಕಂಪ್ಯೂಟರ್ ಇಂಟಿಗ್ರೇಟೆಡ್ ಮ್ಯಾನ್ಯುಫ್ಯಾಕ್ಚರಿಂಗ್, ಸರ್ಟಿಫಿಕೇಟ್ ಡಿಪ್ಲೋಮಾ ಇನ್ ಇಂಡಸ್ಟ್ರಿಯಲ್ ಇಲೆಕ್ಟ್ರಾನಿಕ್ಸ್ ಮತ್ತು ಹೆಣ್ಣು ಮಕ್ಕಳಿಗಾಗಿ ಡಿಪ್ಲೋಮಾ ಇನ್ ಇಲೆಕ್ಟ್ರಾನಿಕ್ಸ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿಯನ್ನು ಕರೆಯಲಾಗಿದೆ. ಅಲ್ಲದೆ, ಐಟಿಐ ಡಿಪ್ಲೋಮಾ ಬಿಇ (ಮ್ಯೆಕಾನಿಕಲ್ ಕ್ಷೇತ್ರದಲ್ಲಿ) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಉದ್ಯೋಗ ನಿಮಿತ್ತ ಅಲ್ಪಾವಧಿ ತರಬೇತಿಗಳನ್ನು ನಡೆಸಲಾಗುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಜಿಟಿಟಿಸಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಜೂ.7ರಂದು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಮೊ.-91416 29585, 91416 29580 ಸಂಪರ್ಕಿಸಬಹುದು ಎಂದು ಪ್ರಕಟನೆ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News