ಬರಿಮಾರು: ಕುಸಿದು ಬಿದ್ದು ಸಾವು
Update: 2016-05-28 16:42 IST
ಬಂಟ್ವಾಳ, ಮೇ 28: ತಾಲೂಕಿನ ಬರಿಮಾರು ಗ್ರಾಮದ ಮಾದುಗುರಿ ಎಂಬಲ್ಲಿ ಅಸೌಖ್ಯ ಹೊಂದಿದ್ದ ವೃದ್ಧರೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಇಲ್ಲಿನ ನಿವಾಸಿ ಗುರುವ (60) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಇವರ ಪತ್ನಿ ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಶನಿವಾರ ಬೆಳಗ್ಗೆ ಬಂದು ನೋಡಿದಾಗ ಪತಿ ಮನೆಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿರುವುದು ತಿಳಿದು ಬಂದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.