×
Ad

ಉಮೇಶ್ ಭಟ್ ಮರಾಠೆ

Update: 2016-05-28 22:01 IST

ಕಡಬ: ಡೆಂಗ್ಯೂ ಜ್ವರ ಪೀಡಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಕುಟ್ರುಪ್ಪಾಡಿ ಗ್ರಾಮದ ವಾಳ್ಯ ನಿವಾಸಿ ಉಮೇಶ್ ಭಟ್ ಮರಾಠೆ(61) ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕುಟ್ರುಪ್ಪಾಡಿಯ ಹೊಸಮಠ ಪೇಟೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಉಮೇಶ್ ಭಟ್ ಮರಾಠೆ ಆರಂಭದಲ್ಲಿ ಕಡಬದ ಖಾಸಗಿ ಚಿಕಿತ್ಸಾಲಯದಲ್ಲಿ ಜ್ವರಕ್ಕಾಗಿ ಚಿಕಿತ್ಸೆ ಪಡೆದು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಅಲ್ಲಿಂದ ಅವರನ್ನು 18 ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಡೆಂಗ್ಯೂ ಜ್ವರದಿಂದಾಗಿ ರಕ್ತದ ಕಣಗಳ ಕುಸಿತ ಉಂಟಾಗಿ ತೀವ್ರ ಅಸ್ವಸ್ಥರಾಗಿದ್ದ ಅವರಿಗೆ 18 ದಿನಗಳಲ್ಲಿ 48 ಯೂನಿಟ್ರಕ್ತ ನೀಡಲಾಗಿತ್ತು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News